Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯುಗಯುಗಾಂತರಕ್ಕೂ ರಾಜ್ಯವಾಳುವವನು ಸರ್ವೇಶ್ವರನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನೇ ಯುಗಯುಗಾಂತರಗಳಲ್ಲಿಯೂ ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಯೆಹೋವನು ಎಂದೆಂದಿಗೂ ಆಳುವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಯೆಹೋವ ದೇವರು ಯುಗಯುಗಾಂತರಗಳವರೆಗೆ ಆಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:18
13 ತಿಳಿವುಗಳ ಹೋಲಿಕೆ  

ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.


ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು