Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಬಲವೂ ಕೀರ್ತನೆಯೂ ಯಾಹುವೇ, ಆತನಿಂದ ನನಗೆ ರಕ್ಷಣೆಯುಂಟಾಯಿತು. ನಮ್ಮ ದೇವರು ಆತನೇ, ಆತನನ್ನು ವರ್ಣಿಸುವೆವು; ನಮ್ಮ ಪಿತೃಗಳ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:2
64 ತಿಳಿವುಗಳ ಹೋಲಿಕೆ  

ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.


ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.


ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.


ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.


ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.


ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.


ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.


ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.


ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.


ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.


ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.


ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.


ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.


ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.


ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.


ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು.


ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.


ಯೆಹೋವನು, “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ ‘ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?


ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,


ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.


ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.


ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.


ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.


ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.


ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು