ವಿಮೋಚನಕಾಂಡ 15:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತರುವಾಯ ‘ಮಾರಾ’ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರು ಸಿಕ್ಕಿತಾದರೂ ಅದು ಕಹಿಯಾಗಿತ್ತು. ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದ ಆ ಸ್ಥಳಕ್ಕೆ ‘ಮಾರಾ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತರುವಾಯ ಮಾರಾ ಎಂಬ ಸ್ಥಳವನ್ನು ಸೇರಿದರು; ಆದರೆ ಆ ಸ್ಥಳದ ನೀರು ಕಹಿಯಾಗಿದ್ದದರಿಂದ ಅವರಿಗೆ ಅದನ್ನು ಕುಡಿಯುವದಕ್ಕಾಗದೆ ಹೋಯಿತು. ಅದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಬಳಿಕ ಅವರು ಮಾರಾ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕೆಂದರೆ ಅದು ಬಹು ಕಹಿಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ “ಮಾರಾ” ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಮಾರಾ ಎಂಬಲ್ಲಿಗೆ ಬಂದ ಮೇಲೆ ಅಲ್ಲಿಯ ನೀರನ್ನು ಕುಡಿಯಲಾರದೆ ಇದ್ದರು; ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು “ಮಾರಾ” ಎಂದು ಕರೆಯಲಾಯಿತು. ಅಧ್ಯಾಯವನ್ನು ನೋಡಿ |