ವಿಮೋಚನಕಾಂಡ 15:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮೋಶೆ ಸರ್ವೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿದನು. ಆಗ ಸರ್ವೇಶ್ವರ ಅವನಿಗೆ ಒಂದು ಗಿಡವನ್ನು ತೋರಿಸಿದರು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲ್ಯರಿಗಾಗಿ ಒಂದು ನಿಯಮವನ್ನು ನಿರ್ಣಯಮಾಡಿ ಅವರನ್ನು ಪರೀಕ್ಷಿಸಿ ಹೀಗಂದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು. ಅಲ್ಲಿ ದೇವರು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿದರು. ಅಲ್ಲಿಯೇ ದೇವರು ಅವರನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿ |