Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನೆದುರಾಳಿಗಳನು ಕೆಡವಿಬಿಡುತಿ ಮಹಾ ತೇಜಸ್ವಿಯಾಗಿ ಒಣಹುಲ್ಲಂತೆ ಭಸ್ಮಮಾಡುತಿ ಅವರನು ಕೋಪಾಗ್ನಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನಗೆದುರಾಗಿ ನಿಲ್ಲುವವರನ್ನು ಕೆಡವಿಬಿಡುತ್ತೀ, ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಭಸ್ಮ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನಿನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:7
29 ತಿಳಿವುಗಳ ಹೋಲಿಕೆ  

ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.


ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.


ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.


ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.


ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,


‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.


ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.


ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.


ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.


ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.


ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು