Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರ ಸಮೂಹವೆಲ್ಲಾ ಏಲೀವಿುನಿಂದ ಹೊರಟ ಮೇಲೆ ಅವರು ಐಗುಪ್ತದೇಶವನ್ನು ಬಿಟ್ಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀವಿುಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನೆಂಬ ಅರಣ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಅವರು ಏಲೀಮಿನಿಂದ ಪ್ರಯಾಣಮಾಡಿ ಸಿನ್ ಅರಣ್ಯಕ್ಕೆ ಬಂದರು. ಈ ಸ್ಥಳವು ಏಲೀಮಿನ ಮತ್ತು ಸೀನಾಯ್ ಬೆಟ್ಟದ ನಡುವೆ ಇತ್ತು. ಈಜಿಪ್ಟನ್ನು ಬಿಟ್ಟ ನಂತರ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ಈ ಸ್ಥಳಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣಮಾಡಿ, ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ, ಸೀನಾಯಿ ಪರ್ವತಕ್ಕೂ ಮಧ್ಯೆ ಇರುವ ಸೀನ್ ಮರುಭೂಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:1
7 ತಿಳಿವುಗಳ ಹೋಲಿಕೆ  

ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು