Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:10
12 ತಿಳಿವುಗಳ ಹೋಲಿಕೆ  

ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.


ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.


ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.


ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.


ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು