ವಿಮೋಚನಕಾಂಡ 16:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದಾಗ್ಯೂ ಅವರಲ್ಲಿ ಕೆಲವರು ಮೋಶೆಯ ಮಾತನ್ನು ಕೇಳದೆ ಅದರಲ್ಲಿ ಸ್ವಲ್ಪವನ್ನು ಮರುದಿವಸದ ತನಕ ಇಟ್ಟುಕೊಂಡರು. ಆಗ ಅದು ಹುಳು ಬಿದ್ದು, ನಾತಹಿಡಿದು, ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಸಿಟ್ಟುಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದಾಗ್ಯೂ ಅವರಲ್ಲಿ ಕೆಲವರು ಮೋಶೆಯ ಮಾತನ್ನು ಕೇಳದೆ ಅದರಲ್ಲಿ ಸ್ವಲ್ಪವನ್ನು ಮರುದಿವಸದ ತನಕ ಇಟ್ಟುಕೊಂಡಾಗ ಅದು ಹುಳಬಿದ್ದು ನಾತಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಸಿಟ್ಟುಗೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನವರೆಗೆ ಇಟ್ಟುಕೊಂಡಾಗ, ಅದು ಹುಳ ಬಿದ್ದು ಹೊಲಸುವಾಸನೆ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿಕೊಂಡನು. ಅಧ್ಯಾಯವನ್ನು ನೋಡಿ |