ವಿಮೋಚನಕಾಂಡ 16:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಕ್ಕೆ ಅವನು - ಇದು ಯೆಹೋವನು ಹೇಳಿದ ಮಾತು; ನಾಳೆ ವಿರಾಮಮಾಡಿಕೊಳ್ಳತಕ್ಕ ಯೆಹೋವನ ಪರಿಶುದ್ಧ ಸಬ್ಬತ್ ದಿನವಾಗಿದೆ. [ಈ ಹೊತ್ತಿಗೆ] ಸುಡಬೇಕಾದದ್ದನ್ನು ಸುಟ್ಟು ಬೇಯಿಸಬೇಕಾದದ್ದನ್ನು ಬೇಯಿಸಿದ ನಂತರ ವಿುಕ್ಕದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದ್ದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು. ಅಧ್ಯಾಯವನ್ನು ನೋಡಿ |