Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:3
32 ತಿಳಿವುಗಳ ಹೋಲಿಕೆ  

ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು


ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.


ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.


ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.


ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.


ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?


ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.


ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,


ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.


ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.


ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?


ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.


ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.


ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.


ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?


ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.


ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?


ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.


ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು