Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇಸ್ರಾಯೇಲ್ಯರು ಆ ಆಹಾರಕ್ಕೆ ಮನ್ನ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಕಲಸಿದ ದೋಸೆಗಳ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇಸ್ರಾಯೇಲರು ಆ ಆಹಾರಕ್ಕೆ ಮನ್ನಾ, ಎಂದು ಹೆಸರಿಟ್ಟರು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನುತುಪ್ಪ ಕಲಸಿದ ದೋಸೆಯಂತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:31
8 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.


ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.


ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.


ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.


ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.


ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು