Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 (ನಂತರ ಆರೋನನು, ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ ಮುಂದುಗಡೆಯಲ್ಲಿ ಇಟ್ಟನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮನ್ನವನ್ನು ಸಂರಕ್ಷಿಸುವುದಕ್ಕೆ ಸಾಕ್ಷಿಯಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:34
13 ತಿಳಿವುಗಳ ಹೋಲಿಕೆ  

ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.


ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು


ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.


ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.


ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.


ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.


ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.


ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು