Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಮತ್ತು ಆರೋನರು ಇಸ್ರಯೇಲರೆಲ್ಲರನ್ನು ಉದ್ದೇಶಿಸಿ, “ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವರು ಸರ್ವೇಶ್ವರ ಸ್ವಾಮಿಯೇ ಎಂಬುದು ಈ ಸಂಜೆ ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆ ಆರೋನರು ಇಸ್ರಾಯೇಲ್ಯರೆಲ್ಲರಿಗೆ - ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದವನು ಯೆಹೋವನೇ ಎಂಬದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆ, ಆರೋನರು ಇಸ್ರಾಯೇಲರಿಗೆಲ್ಲಾ, “ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದವರು ಯೆಹೋವ ದೇವರೇ, ಎಂದು ಸಾಯಂಕಾಲವಾದಾಗ ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:6
14 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.


ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.


ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.


ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.


ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು