ವಿಮೋಚನಕಾಂಡ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೊತ್ತಾರೆಯಲ್ಲಿಯೂ ಆತನ ಮಹಿಮೆಯು ನಿಮಗೆ ಕಾಣಬರುವದು. ನೀವು ಯೆಹೋವನ ಮೇಲೆ ಗುಣುಗುಟ್ಟುವ ಮಾತುಗಳು ಆತನಿಗೆ ಕೇಳಿಸಿದವು; ನಮ್ಮ ಮೇಲೆ ನೀವು ಗುಣುಗುಟ್ಟುವದೇನು? ನಾವು ಎಷ್ಟು ಮಾತ್ರದವರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು. ಅಧ್ಯಾಯವನ್ನು ನೋಡಿ |