Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗಲೆಲ್ಲಾ ಇಸ್ರಯೇಲರು ಜಯಶೀಲರಾಗುತ್ತಿದ್ದರು, ಇಳಿಸುವಾಗಲೆಲ್ಲಾ ಅಮಾಲೇಕ್ಯರು ಜಯಶೀಲರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗ ಇಸ್ರಾಯೇಲ್ಯರು ಬಲವಾಗುವರು; ಇಳಿಸುವಾಗ ಅಮಾಲೇಕ್ಯರು ಬಲವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೋಶೆ ತನ್ನ ಕೈಗಳನ್ನು ಮೇಲೆತ್ತಿದಾಗ ಇಸ್ರೇಲರು ಜಯಗಳಿಸಿದರು. ಆದರೆ ಮೋಶೆಯು ತನ್ನ ಕೈಗಳನ್ನು ಕೆಳಗಿಳಿಸಿದಾಗ ಅಮಾಲೇಕ್ಯರು ಜಯಗಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೋಶೆಯು ತನ್ನ ಕೈಯನ್ನು ಎತ್ತಿದಾಗ, ಇಸ್ರಾಯೇಲರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:11
8 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.


ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.


ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.


ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು