ವಿಮೋಚನಕಾಂಡ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲ್ಯರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರತಂದದ್ದನ್ನೂ ವಿುದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿ |