ವಿಮೋಚನಕಾಂಡ 18:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮೋಶೆಯು ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ಅವನ ಮಾವನು ನೋಡಿ ಅವನಿಗೆ - ನೀನು ಯಾತಕ್ಕೆ ಜನರಿಗೊಸ್ಕರ ಇಷ್ಟು ಪ್ರಯಾಸಪಡುತ್ತಿ? ಪ್ರಾತಃಕಾಲ ಮೊದಲುಗೊಂಡು ಸಾಯಂಕಾಲದವರೆಗೂ ಜನರು ನಿನ್ನ ಹತ್ತಿರ ನಿಲ್ಲುತ್ತಾರಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮೋಶೆಯು ಜನರ ನ್ಯಾಯತೀರಿಸುವುದನ್ನು ಇತ್ರೋನನು ನೋಡಿ, “ನೀನು ಯಾಕೆ ಹೀಗೆ ಮಾಡುತ್ತಿರುವೆ? ನೀನೊಬ್ಬನೇ ಯಾಕೆ ನ್ಯಾಯತೀರಿಸಬೇಕು? ಜನರು ದಿನವೆಲ್ಲಾ ನಿನ್ನ ಬಳಿಗೆ ಯಾಕೆ ಬರಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇತ್ರೋವನು ಮೋಶೆಯು ಜನರಿಗಾಗಿ ಮಾಡುವುದನ್ನೆಲ್ಲಾ ನೋಡಿದಾಗ, ಅವನು ಮೋಶೆಗೆ, “ಇದೇನು ಜನರಿಗೆ ನೀನು ಮಾಡುವುದು? ಏಕೆ ನೀನೊಬ್ಬನೇ ನ್ಯಾಯಾಧೀಶನಾಗಿ ಕೂತಿರಲಾಗಿ, ಜನರು ಬೆಳಗಿನಿಂದ ಸಂಜೆಯವರೆಗೆ ನಿನ್ನ ಬಳಿಯಲ್ಲಿ ನಿಂತಿರಬೇಕು?” ಎಂದನು. ಅಧ್ಯಾಯವನ್ನು ನೋಡಿ |