Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:21
49 ತಿಳಿವುಗಳ ಹೋಲಿಕೆ  

ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.


ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,


ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;


“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ


ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.


ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.


ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.


ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.


ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,


ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.


ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.


ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.


ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.


ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.


ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.


ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.


ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?


ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.


ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು