Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ; ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವದರಿಂದ ನಿನಗೆ ಸುಲಭವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇವರು ಎಲ್ಲಾ ಕಾಲಗಳಲ್ಲಿಯೂ ಜನರಿಗೆ ನ್ಯಾಯತೀರಿಸಲಿ. ಆದರೆ ದೊಡ್ಡ ವ್ಯಾಜ್ಯಗಳನ್ನೆಲ್ಲಾ ನಿನ್ನ ಮುಂದೆ ತಂದು, ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಆಗ ನಿನಗೆ ಸುಲಭವಾಗುವುದು. ಅವರೂ ನಿನ್ನ ಸಂಗಡ ಭಾರವನ್ನು ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:22
12 ತಿಳಿವುಗಳ ಹೋಲಿಕೆ  

ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,


ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,


ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.


ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.


ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.


ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು