ವಿಮೋಚನಕಾಂಡ 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೀಗೆ ಮಾಡಲು ದೇವರು ನಿನಗೆ ಅಪ್ಪಣೆ ಕೊಡಲಿ; ಮಾಡಿದರೆ ಈ ಹೊಣೆಯನ್ನು ನಿರ್ವಹಿಸಲು ಶಕ್ತನಾಗುವೆ; ಈ ಜನರೂ ಕೂಡ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವರು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೇವರು ಹೀಗೆ ಮಾಡುವದಕ್ಕೆ ನಿನಗೆ ಅಪ್ಪಣೆ ಕೊಡುವದಾದರೆ ನೀನು ಈ ಕೆಲಸದ ಭಾರವನ್ನು ನಿರ್ವಹಿಸಲಾಗುವದು; ಇದು ಮಾತ್ರವಲ್ಲದೆ ಈ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಸಂತೋಷವಾಗಿ ಹೋಗುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀನು ಈ ಸಂಗತಿಗಳನ್ನು ಮಾಡಿದರೆ, ಯೆಹೋವನ ಚಿತ್ತವಿದ್ದರೆ, ನೀನು ನಿನ್ನ ಕೆಲಸವನ್ನು ಮಾಡುತ್ತಾ ಮುಂದುವರಿಯಲು ಶಕ್ತನಾಗುವೆ ಮತ್ತು ಅದೇ ಸಮಯದಲ್ಲಿ ಜನರೆಲ್ಲರೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮನೆಗೆ ಹೋಗಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು. ಅಧ್ಯಾಯವನ್ನು ನೋಡಿ |