Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಳಿಕ ಮೋಶೆ ತನ್ನ ಮಾವನನ್ನು ಬೀಳ್ಕೊಟ್ಟನು. ಅವನು ತನ್ನ ನಾಡಿಗೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ ಅವನು ಸ್ವದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸ್ವಲ್ಪ ಸಮಯದ ನಂತರ ಮೋಶೆಯು ತನ್ನ ಮಾವನಾದ ಇತ್ರೋನನನ್ನು ಬೀಳ್ಕೊಟ್ಟನು; ಇತ್ರೋನನು ತನ್ನ ಸ್ವದೇಶಕ್ಕೆ ಹಿಂತಿರುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತರುವಾಯ ಮೋಶೆಯು ತನ್ನ ಮಾವ ಇತ್ರೋವನಿಗೆ ಸಾಗಕಳುಹಿಸಿದಾಗ, ಅವನು ಸ್ವದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:27
5 ತಿಳಿವುಗಳ ಹೋಲಿಕೆ  

ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.


ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.


ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.


ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು