Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಮೋಶೆಯು - ಯೆಹೋವನು ಇಸ್ರಾಯೇಲ್ಯರಿಗೋಸ್ಕರ ಫರೋಹನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ಮಾವನಿಗೆ ವಿವರಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:8
23 ತಿಳಿವುಗಳ ಹೋಲಿಕೆ  

ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,


ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು.


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.


ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.


ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.


ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.


ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.


ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು