Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂಥವನನ್ನು ಯಾರೂ ಕೈಯಿಂದ ಮುಟ್ಟದೆ ಕಲ್ಲೆಸೆದು ಅಥವಾ ಬಾಣಬಿಟ್ಟು ಕೊಲ್ಲಬೇಕು. ಬೆಟ್ಟವನ್ನು ಮುಟ್ಟಿದವರು ಮನುಷ್ಯನಾಗಿರಲಿ, ಪಶುಪ್ರಾಣಿಯಾಗಲಿ ಉಳಿಯಬಾರದು.’ ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟವನ್ನೇರಿ ಬರಬೇಕೆಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಂಥವನನ್ನು ಯಾರೂ ಮುಟ್ಟಕೂಡದು; ಕಲ್ಲುಗಳನ್ನಾದರೂ ಬಾಣಗಳನ್ನಾದರೂ ಎಸೆದು ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ ಪಶುವಾಗಲಿ ಬೆಟ್ಟವನ್ನು ಮುಟ್ಟಿದರೆ ಉಳಿಯಬಾರದು. ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾರೂ ಅಂಥವರನ್ನು ಮುಟ್ಟಬಾರದು. ಮುಟ್ಟಿದ ಪಶುವಾಗಲಿ, ಮನುಷ್ಯನಾಗಲಿ ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು.’ ದೀರ್ಘವಾಗಿ ತುತೂರಿ ಊದುವ ಸಮಯದಲ್ಲಿ ಅವರು ಬೆಟ್ಟದ ಬಳಿಗೆ ಬರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:13
11 ತಿಳಿವುಗಳ ಹೋಲಿಕೆ  

ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.


ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.


ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.


ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.


ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು