ವಿಮೋಚನಕಾಂಡ 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ.’ ಇಸ್ರಾಯೇಲರಿಗೆ ನೀನು ಹೇಳಬೇಕಾದ ಮಾತುಗಳು ಇವೇ,” ಎಂದರು. ಅಧ್ಯಾಯವನ್ನು ನೋಡಿ |
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.