Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:14
17 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,


ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.


“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.


ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು