Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಲ್ಲಿ ಒಂದು ಬಾವಿಯ ಹತ್ತಿರ ಕೂತುಕೊಂಡಿರಲು ವಿುದ್ಯಾನ್ಯರ ಆಚಾರ್ಯನ ಏಳುಮಂದಿ ಹೆಣ್ಣುಮಕ್ಕಳು ಬಂದು ತಂದೆಯ ಕುರಿಗಳಿಗೆ ಕುಡಿಸುವದಕ್ಕೋಸ್ಕರ ನೀರು ಸೇದಿ ದೋಣಿಗಳಲ್ಲಿ ಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:16
11 ತಿಳಿವುಗಳ ಹೋಲಿಕೆ  

ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.


ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;


ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.


ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.


ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.


ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.


ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.


ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು