Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯ ನಮ್ಮನ್ನು ಕುರುಬರ ಕಾಟದಿಂದ ತಪ್ಪಿಸಿದ; ಅದು ಮಾತ್ರವಲ್ಲ, ಅವನು ನಮಗಾಗಿ ನೀರು ಸೇದಿ ಕುರಿಗಳಿಗೆ ಕುಡಿಸಿದ,” ಎಂದು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಗುಪ್ತ್ಯನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಗೆ ತಪ್ಪಿಸಿದನು; ಇಷ್ಟು ಮಾತ್ರವಲ್ಲದೆ ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಹುಡುಗಿಯರು, “ಕುರುಬರು ನಮಗೆ ಅಡ್ಡಿ ಮಾಡಿದಾಗ ಈಜಿಪ್ಟಿನವನೊಬ್ಬನು ನಮ್ಮ ನೆರವಿಗೆ ಬಂದು ನಮಗೂ ನಮ್ಮ ಕುರಿಗಳಿಗೂ ನೀರು ಸೇದಿ ಕೊಟ್ಟನು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯನು ಕುರುಬರ ಕೈಯಿಂದ ನಮ್ಮನ್ನು ತಪ್ಪಿಸಿ, ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ, ಮಂದೆಗೆ ಕುಡಿಸಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:19
4 ತಿಳಿವುಗಳ ಹೋಲಿಕೆ  

ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.


ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.


ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?” ಎಂದು ಕೇಳಿದನು.


ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು