Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಕೆ ಗಂಡು ಮಗುವನ್ನು ಹೆರಲು, ಮೋಶೆ - ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ ಎಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಚಿಪ್ಪೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಕೆಯು ಅವನಿಗೆ ಮಗನನ್ನು ಹೆತ್ತಾಗ, ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿಟ್ಟನು ಏಕೆಂದರೆ ಅವನು, “ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:22
15 ತಿಳಿವುಗಳ ಹೋಲಿಕೆ  

ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‍ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು.


ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?


ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.


“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.


ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.


“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು