ವಿಮೋಚನಕಾಂಡ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು. ಅಧ್ಯಾಯವನ್ನು ನೋಡಿ |