ವಿಮೋಚನಕಾಂಡ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಷ್ಟರಲ್ಲಿ ಫರೋಹನ ಪುತ್ರಿ ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು. ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ನಡುವೆ ಪೆಟ್ಟಿಗೆಯೊಂದನ್ನು ಕಂಡಳು. ದಾಸಿಯೊಬ್ಬಳನ್ನು ಕಳಿಸಿ ಅದನ್ನು ತರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಷ್ಟರಲ್ಲಿ ಫರೋಹನ ಕುಮಾರ್ತೆಯು ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು; ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನಲ್ಲಿ ಪೆಟ್ಟಿಗೆಯನ್ನು ಕಂಡು ದಾಸಿಯನ್ನು ಕಳುಹಿಸಿ ತರಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಫರೋಹನ ಮಗಳು ನೈಲ್ ನದಿಯಲ್ಲಿ ಸ್ನಾನ ಮಾಡುವದಕ್ಕೆ ಬಂದಳು. ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಜಂಬು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ, ಅದನ್ನು ತರಿಸಿದಳು. ಅಧ್ಯಾಯವನ್ನು ನೋಡಿ |