Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪೆಟ್ಟಿಗೆಯನ್ನು ತೆರೆದು ನೋಡುವಾಗ ಏನಾಶ್ಚರ್ಯ! ಅದರಲ್ಲಿ ಅಳುವ ಕೂಸು! ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದನ್ನು ತೆರೆದು ನೋಡುವಾಗ ಆಹಾ, ಅಳುವ ಕೂಸು. ಆಕೆ ಅದರ ಮೇಲೆ ಕನಿಕರಪಟ್ಟು - ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದೆಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಪೆಟ್ಟಿಗೆಯನ್ನು ತೆರೆದಾಗ, ಕೂಸನ್ನು ನೋಡಿದಳು. ಕೂಸು ಅಳುತ್ತಿತ್ತು. ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. ಅವಳು, “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:6
10 ತಿಳಿವುಗಳ ಹೋಲಿಕೆ  

ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.


ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.


ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.


ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.


ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು.


“ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.


ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು