Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರು ಕೊಟ್ಟ ಆಜ್ಞೆಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಮುಂದಣ ಆಜ್ಞೆಗಳನ್ನೆಲ್ಲಾ ಕೊಟ್ಟನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:1
11 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.


ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.


ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು.


ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.


“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು