Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:11
17 ತಿಳಿವುಗಳ ಹೋಲಿಕೆ  

ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”


ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.


ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,


ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.


ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು