ವಿಮೋಚನಕಾಂಡ 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.