Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತೊಬ್ಬನ ಮನೆಯನ್ನು ಆಶಿಸಬಾರದು; ಮತ್ತೊಬ್ಬನ ಹೆಂಡತಿ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:17
41 ತಿಳಿವುಗಳ ಹೋಲಿಕೆ  

ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.


ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.


ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.


ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.


ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.


ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.


ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.


ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.


ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.


“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,


ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.


“ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’


“ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.


ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು