Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:24
44 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.


ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.


ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.


ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.


ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.


ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.


ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.


ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.


ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.


ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.


ಅದಕ್ಕೆ ಮೋಶೆಯು, “ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು.


ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.


ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.


ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.


ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.


ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.


ಆಗ ನಾಮಾನನು ಎಲೀಷನಿಗೆ, “ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.


ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು