Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀವು ನನಗಾಗಿ ಕಲ್ಲಿನಿಂದ ಬಲಿಪೀಠವನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು. ಏಕೆಂದರೆ ಉಳಿ ಮುಂತಾದುದನ್ನು ಉಪಯೋಗಿಸಿದರೆ ಅದು ಅಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದಲ್ಲದೆ ನನ್ನ ಯಜ್ಞವೇದಿಯನ್ನು ಮೆಟ್ಲುಗಳಿಂದ ಏರಕೂಡದು; ಹಾಗೆ ಏರಿದರೆ ನಿಮ್ಮ ರಹಸ್ಯಾಂಗವು ಕಾಣಿಸೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನನಗಾಗಿ ಬಲಿಪೀಠದ ಮೇಲೆ ಹೋಗಲು ಹತ್ತುವಾಗ ನಿನ್ನ ಬೆತ್ತಲೆತನ ಕಾಣಬಾರದು. ಅದರ ಮೆಟ್ಟಲುಗಳನ್ನು ಹತ್ತಬಾರದು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:26
8 ತಿಳಿವುಗಳ ಹೋಲಿಕೆ  

ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.


ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು