Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:8
22 ತಿಳಿವುಗಳ ಹೋಲಿಕೆ  

ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.


“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


“‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.


ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.


“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.


ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.


ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.


ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.


ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,


ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,


ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.


ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,


ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.


ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು