ವಿಮೋಚನಕಾಂಡ 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕೊಲ್ಲಬೇಕೆಂಬ ಉದ್ದೇಶದಿಂದಲೇ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಯಜ್ಞವೇದಿಯ ಬಳಿಯಿಂದಲೂ ಎಳೆದು ಅವನಿಗೆ ಮರಣಶಿಕ್ಷೆಯನ್ನು ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು. ಅಧ್ಯಾಯವನ್ನು ನೋಡಿ |