Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಂಥ ಸಂದರ್ಭಗಳಲ್ಲಿ ಹೊಡೆದವನಿಗೆ ಶಿಕ್ಷೆಯಾಗಬಾರದು. ಆದರೆ ಗಾಯಗೊಂಡವನು ಕೆಲಸ ಮಾಡಲಾರದೆ ಹೋದ ಕಾಲಕ್ಕೆ ತಕ್ಕಷ್ಟು ಹಣ ಕೊಡಬೇಕು. ಹಾಗು ಅವನು ಪೂರ್ಣ ಸ್ವಸ್ಥನಾಗುವ ವರೆಗೂ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೂ ಆ ಮನುಷ್ಯನು ಕೆಲಸಮಾಡಲಾರದೆಹೋದ ಕಾಲಕ್ಕೆ ಅವನು ತಕ್ಕಷ್ಟು ಹಣಕೊಟ್ಟು ಅವನನ್ನು ಪೂರ್ಣವಾಗಿ ಸ್ವಸ್ಥಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ, ಅವನನ್ನು ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಪೆಟ್ಟು ತಿಂದವನು ಗುಣಹೊಂದುವವರೆಗೆ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನನ್ನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:19
4 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.


ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,


ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು