Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೆ ಆ ಎತ್ತು ಹಿಂದಿನಿಂದಲೂ ತಿವಿಯುವ ಸ್ವಭಾವದ್ದೆಂದು ಒಡೆಯನಿಗೆ ಎಚ್ಚರಿಕೆ ನೀಡಿದ್ದರೂ ಅವನು ಅದನ್ನು ಕಟ್ಟಿಹಾಕದೆ ಹೋದ ಕಾರಣ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು, ಮಾತ್ರವಲ್ಲ ಆ ಒಡೆಯನು ಕೂಡ ಮರಣದಂಡನೆಗೆ ಗುರಿ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಆ ಎತ್ತು ತತ್ಪೂರ್ವದಲ್ಲಿ ಹಾಯುವ ಸ್ವಭಾವದ್ದೆಂದು ಒಡೆಯನು ಎಚ್ಚರಿಕೆಯನ್ನು ಹೊಂದಿದಾಗ್ಯೂ ಅದನ್ನು ಕಟ್ಟಿಹಾಕದೆ ಹೋದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದ್ದಾದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಒಡೆಯನೂ ಮರಣಶಿಕ್ಷೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲೀಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲೀಕನನ್ನೂ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೆ ಇದ್ದುದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದುಹಾಕಿದರೆ, ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಆದರೆ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:29
5 ತಿಳಿವುಗಳ ಹೋಲಿಕೆ  

ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?


ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.


ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.


ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು