ವಿಮೋಚನಕಾಂಡ 21:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ತಿವಿಸಿಕೊಂಡು ಸತ್ತವನು ದಾಸನು ಅಥವಾ ದಾಸಿಯು ಆಗಿದ್ದ ಪಕ್ಷಕ್ಕೆ ಅವರ ಯಜಮಾನನಿಗೆ ಮೂವತ್ತು ರೂಪಾಯಿ ಈಡುಕೊಡಿಸಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲೀಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದಾಸನನ್ನಾದರೂ, ದಾಸಿಯನ್ನಾದರೂ ಎತ್ತು ಹಾಯ್ದರೆ, ದಾಸನ, ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿ |