ವಿಮೋಚನಕಾಂಡ 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು. ಅಧ್ಯಾಯವನ್ನು ನೋಡಿ |