Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಯಾರಾದರು ತನ್ನ ಮಗಳನ್ನು ದಾಸಿಯಾಗುವುದಕ್ಕೆ ಮಾರಿದರೆ ಗಂಡು ಗುಲಾಮರು ಬಿಡುಗಡೆಯಾಗಿ ಹೋಗುವಂತೆ ಅವಳು ಬಿಡುಗಡೆಯಾಗಿ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವನಾದರೂ ತನ್ನ ಮಗಳನ್ನು ದಾಸಿಯಾಗುವದಕ್ಕೆ ಮಾರಿದರೆ ಪುರುಷರಾದ ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:7
4 ತಿಳಿವುಗಳ ಹೋಲಿಕೆ  

ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.


ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು