Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಒಬ್ಬನು ಮತ್ತೊಬ್ಬನ ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ, ಬೇರೆ ಯಾವ ಪ್ರಾಣಿಯನ್ನೇ ಆಗಲಿ ತನ್ನ ಬಳಿಯಿಂದ ಸುರಕ್ಷಿತವಾಗಿಟ್ಟುಕೊಳ್ಳಲು ಒಪ್ಪಿಕೊಂಡ ಮೇಲೆ ಅದು ಸತ್ತರೆ, ಗಾಯಗೊಂಡರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಒಬ್ಬನು ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವದಕ್ಕೆ ಮತ್ತೊಬ್ಬನ ವಶಕ್ಕೆ ಕೊಟ್ಟ ಮೇಲೆ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಸ್ವಲ್ಪಕಾಲದವರೆಗೆ ತನ್ನ ಪಶುವನ್ನು ಪೋಷಿಸಬೇಕೆಂದು ತನ್ನ ನೆರೆಯವನನ್ನು ಕೇಳಿಕೊಳ್ಳಬಹುದು. ಈ ಪಶುವು ಕತ್ತೆಯಾಗಿರಬಹುದು, ಎತ್ತಾಗಿರಬಹುದು, ಕುರಿಯಾಗಿರಬಹುದು ಅಥವಾ ಯಾವುದೇ ಪಶುವಾಗಿರಬಹುದು. ಆದರೆ ಅದು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅಥವಾ ಕಳುವಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶುವನ್ನಾದರೂ ಕಾಯುವುದಕ್ಕೆ ಕೊಟ್ಟಾಗ, ಅದು ಸತ್ತರೆ, ಇಲ್ಲವೆ ಊನವಾದರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:10
6 ತಿಳಿವುಗಳ ಹೋಲಿಕೆ  

ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?


ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.


ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.


ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.


ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು