ವಿಮೋಚನಕಾಂಡ 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಒಬ್ಬನು ಮತ್ತೊಬ್ಬನಿಂದ ಪಶುಪ್ರಾಣಿಯನ್ನು ಕೊಂಚಕಾಲಕ್ಕೆ ಎರವಲಾಗಿ ತೆಗೆದುಕೊಂಡಿರುವಾಗ ಆ ಪ್ರಾಣಿಯ, ಒಡೆಯನು ಹತ್ತಿರವಿಲ್ಲದ ಸಮಯದಲ್ಲಿ ಗಾಯಗೊಂಡರೆ ಅಥವಾ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪಕಾಲಕ್ಕೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಊನವಾದರೆ ಇಲ್ಲವೆ ಸತ್ತರೆ ಕೇಳಿಕೊಂಡವನು ಈಡುಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲೀಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಲಾಗಿ ತೆಗೆದುಕೊಂಡಿರಲಾಗಿ ಅದರ ಒಡೆಯನು ಅದರ ಹತ್ತಿರ ಇಲ್ಲದಿರುವಾಗ, ಆ ಪಶುವಿಗೆ ಊನವಾದರೆ, ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಈಡು ಕೊಡಬೇಕು. ಅಧ್ಯಾಯವನ್ನು ನೋಡಿ |