Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವಳ ತಂದೆ ಅವಳನ್ನು ಅವನಿಗೆ ಕೊಡಲು ಒಪ್ಪದೆ ಹೋದರೆ ಆ ವ್ಯಕ್ತಿ ತಕ್ಕ ತೆರವನ್ನು ಹೇಗೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವಳ ತಂದೆ ಅವಳನ್ನು ಅವನಿಗೆ ಕೊಡುವದಕ್ಕೆ ಒಪ್ಪದೆ ಹೋದರೆ ಆ ಮನುಷ್ಯನು ತಕ್ಕ ತೆರವನ್ನು ಹೇಗೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಕೆಯ ತಂದೆಗೆ ಆಕೆಯನ್ನು ಕೊಡುವುದಕ್ಕೆ ಮನಸ್ಸಿಲ್ಲದಿದ್ದರೆ, ಅವನಿಗೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:17
9 ತಿಳಿವುಗಳ ಹೋಲಿಕೆ  

ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.


ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.


ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.


ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ಜೆಬುಲೂನ್” ಎಂದು ಹೆಸರಿಟ್ಟಳು.


“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,


ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು