Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು; ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಆ ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:23
19 ತಿಳಿವುಗಳ ಹೋಲಿಕೆ  

ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.


ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.


ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.


ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.


ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.


ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು