Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಕಾಡುಮೃಗ ಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವು ನನಗೆ ಪರಿಶುದ್ಧ ಜನರಾಗಿರಬೇಕು; ಆದದರಿಂದ ಕಾಡುಮೃಗಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಹೊಲದಲ್ಲಿ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:31
14 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,


“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.


ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.”


ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.


“‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.


ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.


ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು