ವಿಮೋಚನಕಾಂಡ 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೆ ಹೋಗಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಫಸಲಿನಿಂದ ಅವನಿಗೆ ಈಡು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷೇತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೂ ಹೋಗಿ ಮೇಯುವಂತೆ ಮಾಡಿದರೆ ತನ್ನ ಹೊಲದ ಅಥವಾ ದ್ರಾಕ್ಷೇತೋಟದ ಉತ್ತಮಭಾಗದಲ್ಲಿ ಅವನಿಗೆ ಈಡುಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷಿತೋಟದಲ್ಲಾಗಲಿ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲಿ, ದ್ರಾಕ್ಷಿತೋಟವನ್ನಾಗಲಿ ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ, ದ್ರಾಕ್ಷಿ ತೋಟವನ್ನೂ ಮೇಯಿಸಿದರೆ, ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ, ದ್ರಾಕ್ಷಿ ತೋಟದಲ್ಲಿನ ಉತ್ತಮವಾದದ್ದನ್ನೂ ಈಡು ಕೊಡಬೇಕು. ಅಧ್ಯಾಯವನ್ನು ನೋಡಿ |